ಯಾರೂ ಸಹ ಅನಗತ್ಯ ಹೇಳಿಕೆ ನೀಡಬಾರದು-ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ.. ಮೈಸೂರು,ಮೇ,23,2023(..):ಐದು ವರ್ಷವೂ ಸಿದ್ಧರಾಮಯ್ಯ ಅವರೇ ಸಿಎಂ ಎಂಬ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ಸಹ ಅನಗತ್ಯ ಹೇಳಿಕೆ ನೀಡದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ನೀಡಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ಸಚಿವರು, ಶಾಸಕರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸಿಎಂ, ಡಿಸಿಎಂ ಬಗ್ಗೆ 4 ಗೋಡೆಯ ಮಧ್ಯೆ ಮಾತುಕತೆ ನಡೆದಿರುವುದು ಯಾರೂ ಕೂಡ ಗೊಂದಲ ಮೂಡಿಸುವ ಹೇಳಿಕೆಯನ್ನು ನೀಡಬೇಡಿ. ಯಾವುದೇ ತೀರ್ಮಾನಗಳಿದ್ದರೂ ಎಐಸಿಸಿ ನಾಯಕರೇ ನಿರ್ಧರಿಸುತ್ತಾರೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ. : – - - -