ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ. ಕಲಬುರಗಿ,ಮೇ,23,2023(..):ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಜಿಲ್ಲಾ ಸೆನ್ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್ ಮುಕ್ಕಲಪ್ಪ ನಿಲಜೇರಿ ಲೋಕಾಯುಕ್ತ ಬಲೆಗೆ ಬಿದ್ದವರು. 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು 7 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್​ಯಾಗಿ ಬಲೆಗೆ ಬಿದ್ದಿದ್ದಾರೆ. ಅರ್ಜಿ ತನಿಖೆಯಲ್ಲಿ ದೂರುದಾರರ ಹೆಸರು ಕೈ ಬಿಡಲು ಸಂಜನಾ ಬೀರಪ್ಪಾ ಎಂಬುವವರ ಬಳಿ ಮುಕ್ಕಲಪ್ಪ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಲೋಕಾಯುಕ್ತ ಎಸ್​.ಪಿ ಎಆರ್ ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಬಳಿಕ ಲಂಚ ಸ್ವಿಕರಿಸುತ್ತಿದ್ದ ಕಾನ್ಸಟೇಬಲ್ ಮುಕ್ಕಲಪ್ಪನನ್ನ ಬಂಧಿಸಲಾಗಿದೆ. : - - – -.