ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನ. ಬೆಂಗಳೂರು,ಮೇ,22,2023(..):ಇಂದಿನಿಂದ ಮೂರು ದಿನಗಳ ಕಾ ರಾಜ್ಯ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಸದಸ್ಯರ ಪ್ರಮಾಣವಚನ ಸ್ವೀಕಾರ ಮತ್ತು ಸ್ಪೀಕರ್​ ಆಯ್ಕೆ ಹಿನ್ನೆಲೆಯಲ್ಲಿ ಅಧಿವೇಶನ ಮಹತ್ವ ಪಡೆದುಕೊಂಡಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು, ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆ ದಿನ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್​ ಆಗಿ ಆಯ್ಕೆಯಾಗಿರುವ ಆರ್​.ವಿ ದೇಶಪಾಂಡೆ ಅವರು ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ. ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಈ ತಿಂಗಳು 23ರ ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸುವ ಸಾಧ್ಯತೆ ಇದೆ. : - - - – .