ನೂತನ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಶುಭಕೋರಿದ ಪ್ರಧಾನಿ ಮೋದಿ. ಬೆಂಗಳೂರು,ಮೇ,20,2023(..):ರಾಜ್ಯದ ನೂತನ ಸಿಎಂ ಸಿದ‍್ಧರಾಮಯ್ಯ ಹಾಗೂ ನೂತನ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಕೋರಿದ್ದಾರೆ. ಕನ್ನಡದಲ್ಲೇ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ಧರಾಮಯ್ಯ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಅವರಿಗೆ ಶುಭಹಾರೈಕೆಗಳು ಫಲಪ್ರದ ಅಧಿಕಾರಕ್ಕಾಗಿ ನನ್ನ ಶುಭ ಹಾರೈಕೆಗಳು ಎಂದು ಶುಭಕೋರಿದ್ದಾರೆ. ಈಗಾಗಲೇ ಸಿದ್ಧರಾಮಯ್ಯ ಸಿಎಂ ಆದ ಬಳಿಕ ಮೊದಲ ಸಂಪುಟ ಸಭೆ ನಡೆಸಿದ್ದು, 5 ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ನಡುವೆ ಸಚಿವ ಸಂಪುಟ ರಚನೆ ಕಸರತ್ತಿಗಾಗಿ ನಾಳೆ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನವದೆಹಲಿಗೆ ತೆರಳುವ ಸಾಧ್ಯತೆ ಇದೆ. : - – - - .