ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಹಿನ್ನೆಲೆ: ಕೆಪಿಸಿಸಿ ಕಚೇರಿಗೆ‌ ಬಿಗಿ ಪೊಲೀಸ್ ಬಂದೋಬಸ್ತ್. ಬೆಂಗಳೂರು,ಮೇ,18,2023(..):ರಾಜ್ಯದ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದು ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಈ ಹಿನ್ನೆಲೆ ನಗರದಲ್ಲಿರುವ ಕೆಪಿಸಿಸಿ ಕಚೇರಿಗೆ‌ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಕೆಪಿಸಿಸಿ ಕಚೇರಿಗೆ‌ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ 11ಎಸಿಪಿ, 25 ಇನ್ಸ್ಪೆಕ್ಟರ್ , 350 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇನ್ನು ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು, ಏರ್ಪೋಟ್ ಬಳಿ ಸ್ವಾಗತಕ್ಕೆ ಕಾಂಗ್ರೆಸ್ ಮುಖಂಡರು ಸಜ್ಜಾಗಿದ್ದಾರೆ. ಗೊಂಬೆ ಕುಣಿತ, ಕಂಸಾಳೆ, ಕಂಬಳಿ ಕುರುಬ ತಂಡದಿಂದ ಡೊಳ್ಳು ಕುಣಿತ ಪ್ರದರ್ಶನ ನಡೆಯಲಿದೆ. ಹೆಚ್ ಎಎಲ್ ಏರ್ ಪೋರ್ಟ್ ಬಳಿಯೂ ಭದ್ರತೆಗೆ ಪೊಲೀಸರನ್ನ ನಿಯೋಜಿಸಲಾಗಿದೆ. : - –- - - .