ಜನ ಮುಂದಿನ ದಿನಗಳಲ್ಲಿ ಮತ್ತೆ ಜೆಡಿಎಸ್ ಬೇಕು ಎಂದು ಬಯಸುತ್ತಾರೆ- ಮಾಜಿ ಸಿಎಂ ಹೆಚ್.ಡಿಕೆ ವಿಶ್ವಾಸ. ಬೆಂಗಳೂರು,ಮೇ,18,2023(..):ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ರೀತಿಯ ಫಲಿತಾಂಶ ನಮ್ಮ ಪಕ್ಷಕ್ಕೆ ಹೊಸದೇನಲ್ಲ. ಹೆಚ್.ಡಿ ದೇವೇಗೌಡರು ಎರಡು ಬಾರಿ ಸೋತ ಬಳಿಕವೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿತ್ತು. ಜನ ಮುಂದಿನ ದಿನಗಳಲ್ಲಿ ಮತ್ತೆ ಜೆಡಿಎಸ್ ಬೇಕು ಅಂತ ಬಯಸುತ್ತಾರ ಎಂದು ಹೆಚ್​ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜೊತೆ ನಿಲ್ಲುತ್ತೇವೆ. ನನ್ನ ನಿರೀಕ್ಷೆ ಹುಸಿಯಾಗಿದೆ, ಮಾಧ್ಯಮಗಳ ನಿರೀಕ್ಷೆ ನಿಜವಾಗಿದೆ. ನಾನು‌ ಕಳೆದ 6 ತಿಂಗಳಿಂದ ಶ್ರಮಪಟ್ಟು ಕೆಲಸ ಮಾಡಿದ್ದೆ. ಪಂಚರತ್ನ ಯೋಜನೆಗಳು ಜನರಿಗೆ ಇಷ್ಟವಾಗಲಿಲ್ಲ ಅನ್ಸುತ್ತೆ. ಕಾಂಗ್ರೆಸ್ ನ ಗ್ಯಾರಂಟಿಗಳನ್ನು ನಂಬಿ ಮತಹಾಕಿದ್ದಾರೆ‌. ಪಕ್ಷದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಏನೆಲ್ಲಾ ಆಗಿದೆ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. : ----