ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಜೊತೆ ಚರ್ಚಿಸಿ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ. ನವದೆಹಲಿ,ಮೇ,17,2023(..): ರಾಜ್ಯದಲ್ಲಿ ಸಿಎಂ ಸ್ಥಾನ ಸಿದ್ಧರಾಮಯ್ಯರಿಗೆ ಬಹುತೇಕ ಪಕ್ಕ ಎನ್ನಲಾಗುತ್ತಿದ್ದು, ಈ ನಡುವೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಮಾಜಿ ಸಿಎಂ ಸಿದ್ಧರಾಮಯ್ಯ ಚರ್ಚಿಸಿ ತೆರಳಿದ್ದಾರೆ. ಸಿದ್ದರಾಮಯ್ಯ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದರು. ನವದೆಹಲಿಯ ಜನ್​ ಪತ್ ​​​ನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸಿದರು. 20 ನಿಮಿಷಗಳ ಮಹತ್ವದ ಸಭೆ ನಂತರ ಸೋನಿಯಾ ಗಾಂಧಿ ನಿವಾಸದಿಂದ ಸಿದ್ಧರಾಮಯ್ಯ ತೆರಳಿದ್ದು, ಸಿದ್ಧರಾಮಯ್ಯ ಅವರೇ ಸಿಎಂ ಆಗುವ ಸಾಧ್ಯತೆ ಇದ್ದು, ಇಂದು ಮಧ್ಯಾಹ್ನ ಹೈಕಮಾಂಡ್ ನೂತನ ಸಿಎಂ ಹೆಸರನ್ನ ಘೋಷಿಸಲಿದೆ ಎನ್ನಲಾಗಿದೆ. ನಾಳೆಯೇ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. : - - - - –