ಲಿಂಗಾಯತರನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಅಧಿಕಾರ ಕಳೆದುಕೊಂಡಿದೆ-ಮಾಜಿ ಸಿಎಂ ಜಗದೀಶ್ ಶೆಟ್ಟರ್. ಬೆಂಗಳೂರು,ಮೇ,16,2023(..):ಲಿಂಗಾಯತರನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಈಗ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು. ಮಾಜಿ ಸಿಎಂ ಜಗದೀಶ್​ ಶೆಟ್ಟರ್​​ ಅವರ ನಿವಾಸಕ್ಕೆ ಇಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ , ಕಾಂಗ್ರೆಸ್​ ನಾಯಕ ದಿನೇಶ್ ಗುಂಡೂರಾವ್ ಭೇಟಿ ನೀಡಿ ಧನ್ಯವಾದ ಅರ್ಪಿಸಿದರು. ಈ ವೇಳೆ ಮಾತನಾಡಿದ ಜಗದೀಶ್​ ಶೆಟ್ಟರ್, ನನ್ನನ್ನ​ ಸೌಹಾರ್ದಯುತವಾಗಿ​​ನಾಯಕರು ಭೇಟಿ ಮಾಡಿದ್ದರು. ಕಾಂಗ್ರೆಸ್ ಸೇರಿದ ಮೇಲೆ 15 ಕ್ಷೇತ್ರಗಳಲ್ಲಿ ನಾನು ಪ್ರಚಾರ ಮಾಡಿದ್ದೆ. ಲಿಂಗಾಯತರನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಸಿಎಂ ಸ್ಥಾನದಿಂದ ಬಿಎಸ್​ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ್ದೇಕೆ ಎಂದು ಹೇಳಬೇಕಲ್ವಾ? ಬಿಎಸ್​ ಯಡಿಯೂರಪ್ಪ ಕಣ್ಣೀರು ಹಾಕಿದ್ರು. ನನಗೆ ಟಿಕೆಟ್ ಕೊಡದೆ ಅವಮಾನಿಸಿದ್ದರು. ಇದೆಲ್ಲವೂ ಬಿಜೆಪಿ ಹೀನಾಯವಾಗಿ ಸೋಲಲು ಕಾರಣವಾಗಿದೆ ಎಂದರು. ಸಿಎಂ ಹುದ್ದೆಗೆ ಪೈಪೋಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಈ ಬಗ್ಗೆ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ರಾಜಕೀಯದಲ್ಲಿ ಅಧಿಕಾರಕ್ಕಾಗಿ ಸಹಜವಾಗಿ ಗಲಾಟೆ ನಡೆಯುತ್ತದೆ. ಪೂರ್ಣ ಬಹುಮತ ಬಂದಿದೆ, ಉತ್ತಮ ಆಡಳಿತ ಕೊಡಬೇಕು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಒಳ್ಳೆಯ ನಾಯಕರು. ಯಾವುದೇ ಗೊಂದಲವಿಲ್ಲದೆ ನಾಯಕರು ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. : - –- - - .