ಸಿಎಂ ಸ್ಥಾನಕ್ಕೆ ಪೈಪೋಟಿ: ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿದ ಶಾಸಕ ಕೆ.ಎನ್ ರಾಜಣ್ಣ. ಬೆಂಗಳೂರು,ಮೇ,15,2023(..):ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ನಡುವೆ ಪೈಪೋಟಿ ಉಂಟಾಗಿದ್ದು, ನಿನ್ನೆ ಕಾಂಗ್ರೆಸ್​ ಪಕ್ಷ ನಡೆಸಿದ್ದ ಶಾಸಕಾಂಗ ಸಭೆಯಲ್ಲಿ ಶಾಸಕ ಅಭಿಪ್ರಾಯ ಸಹ ಸಂಗ್ರಹಿಸಲಾಗಿದೆ. ಶಾಸಕರು ಗುಪ್ತವಾಗಿ ಚೀಟಿಯಲ್ಲಿ ಸಿಎಂ ಯಾರಾಗಬೇಕೆಂದು ಗುಪ್ತ ಮತದಾನ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ ಸಿದ‍್ಧರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು. ಅವರಿಗೆ ನಾನು ಮತ ಹಾಕಿದ್ದೇನೆ ಎಂದು ಬಹಿರಂಗವಾಗಿಯೇ ಕೇಳಿಕೊಂಡಿದ್ದಾರೆ. ನಾನು ಸಿದ‍್ಧರಾಮಯ್ಯ ಪರ ವೋಟ್ ಹಾಕಿದ್ದೇನೆ, ನನಗೆ ಸಿದ್ದರಾಮಯ್ಯನವರೇ ಸಿಎಂ ಆಗಬೇಕು. ಒಕ್ಕಲಿಗ ಸ್ವಾಮೀಜಿಗಳು ಅವರ ಅಭಿಪ್ರಾಯ ತಿಳಿಸಿದ್ದಾರೆ. ಸಿದ್ಧರಾಮಯ್ಯರನ್ನ ಸಿಎಂ ಮಾಡದೇ ಇನ್ಯಾರನ್ನ ಮಾಡುತ್ತಾರೆ ಎಂದು ಕೆ.ಎನ್ ರಾಜಣ್ಣ ತಿಳಿಸಿದರು. : - - - – – .