ರಾಜ್ಯದಲ್ಲಿ ಬಹುಮತ ಪಡೆದ ಕಾಂಗ್ರೆಸ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ. ನವದೆಹಲಿ,ಮೇ,13,2023(..):ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನ ಗೆದ್ದು ಬಹುಮತ ಪಡೆದ ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನ ಈಡೇರಿಸುವಲ್ಲಿ ಅವರಿಗೆ ನನ್ನ ಶುಭ ಹಾರೈಕೆಗಳು’ ಎಂದಿದ್ದಾರೆ. ‘ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ಬಿಜೆಪಿ ಕಾರ್ಯಕರ್ತರ ಕಠಿಣ ಪರಿಶ್ರಮವನ್ನ ನಾನು ಪ್ರಶಂಸಿಸುತ್ತೇನೆ. ಬಿಜೆಪಿಗಾಗಿ ಕಾರ್ಯಕರ್ತರು ಶ್ರಮಿಸಿದ್ದಾರೆ. ಎಲ್ಲಾ ಕಾರ್ಯಕರ್ತರಿಗೆ ನನ್ನ ಅಭಿನಂದನೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. : - - - – - – .