ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ನಿವಾಸಕ್ಕೆ ಡಿ.ಕೆ ಶಿವಕುಮಾರ್ ಭೇಟಿ. ಬೆಂಗಳೂರು,ಮೇ,13,2023(..):ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಜಯ ಸಾಧಿಸಿದ ಬೆನ್ನಲ್ಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ರಾಮನಗರದಿಂದ ನೇರವಾಗಿ ಸದಾಶಿವನಗರದ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಡಿಕೆ ಶಿವಕುಮಾರ್ ಆಗಮಿಸಿದ್ದು, ನಂತರ ಅಲ್ಲಿಂದ ಕೆಪಿಸಿಸಿ ಕಚೇರಿಗೆ ತೆರಳುವ ಸಾಧ್ಯತೆ ಇದೆ. ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ​ ಗೆಲುವು ಹಿನ್ನೆಲೆ ಎಐಸಿಸಿ ಅಧ್ಯಕ್ಷ ಖರ್ಗೆ ಮನೆಯಲ್ಲಿ ನಾಯಕರು ಸಂಭ್ರಮಾಚರಣೆ ಮಾಡಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ, ವೇಣುಗೋಪಾಲ್​ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. : - - - ’- .