ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡಗೆ ಶಾಕ್ : ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಜಯಭೇರಿ. ಹಾಸನ,ಮೇ,13,2023(..):ಭಾರಿ ಕುತೂಹಲಕ್ಕೆ ಕಾರಣವಾಗಿದ್ದು ಹಾಸನ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಸೋಲನುಭವಿಸಿದ್ದಾರೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ 10 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿ ಸವಾಲು ಹಾಕಿದ್ದ ಪ್ರೀತಂಗೌಡಗೆ ಹಾಸನದ ಜನತೆ ಬಿಗ್ ಶಾಕ್ ನೀಡಿದ್ದಾರೆ. : -- - –-