ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್: ಖಾಸಗಿ ಹೊಟೇಲ್​ನಲ್ಲಿ ಕೈ ​ ನಾಯಕರ ಸಭೆ ಸಾಧ್ಯತೆ. ಬೆಂಗಳೂರು,ಮೇ,13,2023(..):ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದೆ. ಕಾಂಗ್ರೆಸ್ 115 ಕ್ಷೇತ್ರಗಳಲ್ಲಿ, ಬಿಜೆಪಿ 74 ಕ್ಷೇತ್ರಗಳಲ್ಲಿ, ಜೆಡಿಎಸ್ 30 ಕ್ಷೇತ್ರಗಳಲ್ಲಿ, ಇತರೇ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಮುನ್ನಡೆ ಸಾಧಿಸಿರುವ ಹಿನ್ನೆಲೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ ಶುರುವಾಗಿದೆ. ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಹಿನ್ನೆಲೆ ಕಾಂಗ್ರೆಸ್​ ಶಾಸಕರನ್ನು ಒಟ್ಟುಗೂಡಿಸಲು ಕಾಂಗ್ರೆಸ್ ನಾಯಕರು ಶಾಂಗ್ರಿಲಾ ಹೋಟೆಲ್​ನಲ್ಲಿ ಸಭೆ ಸೇರುವ ಸಾಧ್ಯತೆ ಇದೆ. ವರುಣಾದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ, ಕೊರಟಗೆರೆಯಲ್ಲಿ ಡಾ.ಜಿ.ಪರಮೇಶ್ವರ್, ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ಮುನ್ನಡೆ ಸಾಧಿಸಿದ್ದಾರೆ. : - – –