ಅಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿಜಯಪುರ, ಆಗಸ್ಟ್, 21,2024 (..):ಈ ಬಾರಿ ಉತ್ತಮ ಮಳೆಯಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಈ ಮಧ್ಯೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯಕ್ಕ ಭರ್ತಿಯಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೃಷ್ಣಗೆ ಗಂಗಾಪೂಜೆ ನೆರವೇರಿಸಿ ನಂತರ ಸಂಪ್ರದಾಯದಂತೆ ಆಲಮಟ್ಟಿ ಜಲಾಯಶಕ್ಕೆ ಬಾಗಿನ ಅರ್ಪಿಸಿದರು. ಈ ವೇಳೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಸಚಿವರಾದ ಶಿವಾನಂದ ಪಾಟೀಲ್, ಆರ್.ಬಿ ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು. : , ,