ಮೈತ್ರಿ ಅನ್ನೋ ಪ್ರಶ್ನೆಯೇ ಇಲ್ಲ: ಬಿಜೆಪಿ ಮ್ಯಾಜಿಕ್ ನಂಬರ್ ದಾಟುತ್ತೆ-ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಮೇ,12,2023(..):ಬಿಜೆಪಿ ಮ್ಯಾಜಿಕ್ ನಂಬರ್ ದಾಟಲಿದೆ. ಹೀಗಾಗಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸುವ ಪ್ರಶ್ನೆಯೇ ಉದ್ಬವಿಸಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿಗೆ ಬಹುಮತ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಎಲ್ಲಾ ಜಿಲ್ಲೆಗಳಲ್ಲೂ ನಮ್ಮ ಗ್ರೌಂಡ್ ರಿಪೋರ್ಟ್ ತಂದಿದ್ಧೇವೆ. ನಮಗೆ ಮ್ಯಾಜಿಕ್ ನಂಬರ್ ದಾಟುವ ವಿಶ್ವಾಸವಿದೆ. ಮೈತ್ರಿ ಸರ್ಕಾರ ರಚಿಸುವ ಪ್ರಶ್ನೆಯೇ ಉದ್ಬವಿಸಲ್ಲ. ಕೇಂದ್ರದ ನಾಯಕರಿಗೆ ನಾನೇ ವಾಸ್ತವ ಸ್ಥಿತಿಯನ್ನ ತಿಳಿಸಿದ್ದೇನೆ. ಕೇಂದ್ರ ನಾಯಕರಿಗೂ ಬಹುಮತ ಬರುವ ವಿಶ್ವಾಸವಿದೆ ಎಂದರು. ಕಾಂಗ್ರೆಸ್ ಗೆ ಬಹುಮತ ಬರಲ್ಲ. ಕಾಂಗ್ರೆಸ್ ನವರು ಬೇರ ಪಕ್ಷದವರ ಜೊತೆ ಮಾತನಾಡುತ್ತಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ. ವಿಶ್ವಾಸ ಇದ್ದಾಗ ಮೈತ್ರಿ ಅನ್ನೋ ಪ್ರಶ್ನೆಯೇ ಬರುವುದಿಲ್ಲ. ನಮಗೆ ಸಂಪೂರ್ಣ ಬಹುಮತ ಬರುತ್ತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. : –-- - .