ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15 ಲಕ್ಷ ರೂ. ಹಣ ಜಪ್ತಿ. ಬೆಳಗಾವಿ,ಮೇ,9,2023(..):ಬೆಳಗಾವಿಯಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 15 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಮಾಂಜರಿ ಚೆಕ್​ಪೋಸ್ಟ್​​ ಬಳಿ ಹಣವನ್ನ ಪೊಲೀಸರು ಹಣವನ್ನ ಸೀಜ್ ಮಾಡಿದ್ದಾರೆ. ಮಹಾರಾಷ್ಟ್ರದ ಗಡಹಿಂಗ್ಲಜ್‌ನಿಂದ ಮಾಂಜರಿಗೆ ಬರುತ್ತಿದ್ದ ಕಾರು ತಪಾಸಣೆ ವೇಳೆ ಚೀಲದಲ್ಲಿ 15 ಲಕ್ಷ ರೂ ಹಣ ಪತ್ತೆಯಾಗಿದ್ದು, ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ. ನಂತರ ಆದಾತ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : 15 – -- -