ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಮತ್ತೆ ಐಟಿ ದಾಳಿ. ಚಿತ್ರದುರ್ಗ,ಮೇ,9,2023(..):ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ನಿವಾಸದ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಮಧ್ಯಾಹ್ನ ಹಿರಿಯೂರಿನಲ್ಲಿರುವ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 6 ಐಟಿ ಅಧಿಕಾರಿಗಳ ತಂಡದಿಂದ ದಾಳಿಯಾಗಿದ್ದು, ರವೀಂದ್ರ ಅವರ ಪತ್ನಿ ಲತಾ ಸೊಸೆ ಶ್ವೇತಾರನ್ನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಏಪ್ರಿಲ್ 28 ರಂದು ರವೀಂದ್ರಪ್ಪ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿದ್ದರು. : - - – ’- .