ಜೂಜು, ಬೆಟ್ಟಿಂಗ್ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ಕಣ್ಗಾವಲು.. ಬೆಂಗಳೂರು,ಮೇ,9,2023(..):ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರಿದ್ದು, ನಾಳೆ ಮತದಾನ ನಡೆಯಲಿದೆ. ಈ ಮಧ್ಯೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಸೋಲು ಗೆಲುವಿನ ಮೇಲೆ ಜೂಜು, ಬೆಟ್ಟಿಂಗ್ ನಡೆಯುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಜೂಜು, ಬೆಟ್ಟಿಂಗ್ ಅಡ್ಡೆಗಳ ಮೇಲೆ ಕಣ್ಗಾವಲು ಇಟ್ಟಿದ್ದಾರೆ. ಕೆಲವು ಪ್ರಮುಖ ಅಭ್ಯರ್ಥಿಗಳು, ದೊಡ್ಡ ಫೈಟ್ ಇರುವ ಕ್ಷೇತ್ರಗಳಲ್ಲಿ ಕೆಲವು ಆ್ಯಪ್​ ಮೂಲಕ ಚುನಾವಣೆ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಸಿಸಿಬಿಗೆ ಮಾಹಿತಿ ಬಂದಿದೆ. ಈ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಆ್ಯಪ್ ​ಗಳ ಮೇಲೆ ನಿಗಾ ಇರಿಸಿದ್ದಾರೆ. ಜೊತೆಗೆ ಕೆಲವು ವ್ಯಕ್ತಿಗಳ ಮೇಲೆಯೂ ನಿಗಾ ಇಡಲಾಗಿದೆ. ಚುನಾವಣೆಯಲ್ಲಿ ಬೆಟ್ಟಿಂಗ್ ಕಂಡು ಬಂದಲ್ಲಿ ಕಠಿಣ ಕ್ರಮಕ್ಕೆ ಪೊಲೀಸರು ನಿರ್ಧರಿಸಿದ್ದಾರೆ. ಜೂಜು ಮತ್ತು ಬೆಟ್ಟಿಂಗ್ ಮೇಲೆ ನಿಗಾವಹಿಸುವಂತೆ ಸಿಸಿಬಿ ಪೊಲೀಸರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಬೆಟ್ಟಿಂಗ್ ತಡೆಗಾಗಿ ಸಿಸಿಬಿ ವಿಶೇಷ ತಂಡ ಕಾರ್ಯಾಚರಣೆಗಿಳಿದಿದೆ. : - – –