ಭ್ರಷ್ಟಾಚಾರದ ವಿರುದ್ಧ ಏನು ಕ್ರಮ ಕೈಕೊಂಡಿರಿ..? ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ ವಾಗ್ದಾಳಿ. ಬೆಳಗಾವಿ,ಮೇ,6,2023(..):ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ಶಾಸಕರನ್ನು ಖರೀದಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಕಳ್ಳತನದ ಸರ್ಕಾರ ಕಳ್ಳತನವನ್ನೇ ಮಾಡೋದು. ಇಡೀ ದೇಶದಲ್ಲೇ ಅತೀ ಭ್ರಷ್ಟ ಸರ್ಕಾರ ಇದ್ದರೆ ಬಿಜೆಪಿ ಸರ್ಕಾರ ಎಂದು ಕುಟುಕಿದರು. 40% ಕಮಿಷನ್ ಬಗ್ಗೆ ಗುತ್ತಿಗೆದಾರರು ಮೋದಿಗೆ ಪತ್ರ ಬರೆದಿದ್ದರು. ಪ್ರಧಾನಿಯವರೇ ಭ್ರಷ್ಟಾಚಾರ ವಿರುದ್ಧ ಏನು ಕ್ರ‌ಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. : – –- - .