ಡಿ.ಕೆ ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ವೇಳೆ ಹೆಲಿಪ್ಯಾಡ್ ಬಳಿ ಕಾಣಿಸಿಕೊಂಡ ಬೆಂಕಿ.. ಕಾರವಾರ,ಮೇ,4,2023(..):ಕಳೆದ ಎರಡು ದಿನಗಳ ಹಿಂದಷ್ಟೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಬಡಿದು ಅನಾಹುತ ತಪ್ಪಿತ್ತು. ಇದೀಗ ಡಿಕೆ ಶಿವಕುಮಾರ್ ಅವರು ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆಹೊನ್ನಾವರದ ರಾಮತೀರ್ಥ ಬಳಿ ನಡೆದಿದೆ. ಡಿ.ಕೆ ಶಿವಕುಮಾರ್ ಅವರು ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್​​ನಲ್ಲಿ ತೆರಳಿದ್ದರು. ಈ ವೇಳೆ ಹೆಲಿಪ್ಯಾಡ್ ​ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್ ​ಗೆ ಸಿಗ್ನಲ್​​ ಕೊಡುವ ಸ್ಮೋಕ್​ ಕ್ಯಾಂಡಲ್​ನಿಂದ ಬೆಂಕಿ ಕಾಣಿಸಿಕೊಂಡು ನಂತರ ಹುಲ್ಲಿಗೆ ಹೊತ್ತಿಕೊಂಡಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. : - – ,- - – .