ಯಾರ ಜೊತೆಯೂ ಹೊಂದಾಣಿಕೆ ಪ್ರಶ್ನೆಯೇ ಇಲ್ಲ: ಸ್ವಂತ ಬಲದಿಂದ ಅಧಿಕಾರಕ್ಕೆ ಬರ್ತೇವೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ದಾವಣಗೆರೆ,ಮೇ,5,2023(..):ರಾಜ್ಯ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು ಮತದಾನಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇದೆ. ಈ ಮಧ್ಯೆ ಎಲ್ಲಾ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ರೋಡ್ ಶೋ, ಸಮಾರಂಭದ ಮೂಲಕ ಮತಯಾಚನೆ ನಡೆಸುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣವಿದೆ. ನೂರಕ್ಕೆ ನೂರರಷ್ಟು ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ. ನಾವು 135 ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ. ಯಾರ ಜೊತೆಗೂ ಹೊಂದಾಣಿಕೆಯ ಪ್ರಶ್ನೆಯ ಇಲ್ಲ ಎಂದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧದ ಬಗ್ಗೆ ಉಲ್ಲೇಖಿಸಿರುವ ಕುರಿತು ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತೆ ಎಂದರು. : – - - .