ನಟ ಶಿವರಾಜ್ ಕುಮಾರ್ ರನ್ನ ಆತ್ಮೀಯವಾಗಿ ಅಪ್ಪಿಕೊಂಡು ಸಂತಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ. ಶಿವಮೊಗ್ಗ,ಮೇ,2,2023(..):ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಮತ್ತು ಬಿಜೆಪಿಯ ಕೇಂದ್ರ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದು ಮತದಾರರ ಮನ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ನಟ ಶಿವರಾಜ್ ಕುಮಾರ್ ಅವರನ್ನ ರಾಹುಲ್ ಗಾಂಧಿ ಅವರು ಆತ್ಮೀಯವಾಗಿ ಅಪ್ಪಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಇಂದು ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ನಡುವ ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಅಗಮಿಸಿದ್ದಕ್ಕೆ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಅತೀವ ಸಂತಸ ನೀಡಿದೆ. ಶಿವಮೊಗ್ಗದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ರಾಹುಲ್ ಗಾಂಧಿ ಆಗಮಿಸಿದಾಗ ವೇದಿಕೆಯ ಮೇಲೆ ಗೀತಾ ಶಿವರಾಜ್ ಕುಮಾರ್ ಜೊತೆ ಪತಿ ಶಿವರಾಜ್ ಕುಮಾರ್ ಕೂಡ ಇದ್ದರು. ಈ ವೇಳೆ ಮಧು ಬಂಗಾರಪ್ಪ ಅವರು ಶಿವರಾಜ್ ಕುಮಾರರನ್ನು ರಾಹುಲ್ ಗೆ ಪರಿಚಯಿಸಿದರು. ನಂತರ ಶಿವರಾಜ್ ಕುಮಾರ್ ರನ್ನ ರಾಹುಲ್ ಗಾಂಧಿ ಅವರು ಆತ್ಮೀಯವಾಗಿ ಅಪ್ಪಿಕೊಂಡು ಸಂತಸ ವ್ಯಕ್ತಪಡಿಸಿದರು. ಬಳಿಕ ರಾಹುಲ್ ಗಾಂಧಿ ನಟ ಶಿವರಾಜ್ ಕುಮಾರ್ ರೊಂದಿಗೆ ಸ್ವಲ್ಪ ಹೊತ್ತು ಮಾತಾನಾಡಿದರು. : - – - -.