ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ‘ಕೈ’ ನೀಡಿರುವ ಭರವಸೆಗಳೇನು..? ಬೆಂಗಳೂರು,ಮೇ,2,2023(..):ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಚುನಾವಣಾ ಕಣ ರಂಗೇರಿದೆ . ಈ ನಡುವೆ ನಿನ್ನೆಯಷ್ಟೇ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದೀಗ ಕಾಂಗ್ರೆಸ್ ಸಹ ತನ್ನ ಪ್ರಣಾಳಿಕೆಯನ್ನ ರಿಲೀಸ್ ಮಾಡಿದೆ. ಕಾಂಗ್ರೆಸ್​ ಬರಲಿದೆ, ಪ್ರಗತಿ ತರಲಿದೆ ಎನ್ನುವ ಘೋಷ ವಾಕ್ಯದೊಂದಿಗೆ ‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ’ ಎನ್ನುವ ಹೆಸರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಣಾಳಿಕೆಯನ್ನುಬಿಡುಗಡೆಗೊಳಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಪ್ರಣಾಳಿಕೆಯಲ್ಲಿರುವ ಅಂಶಗಳು ಈ ಕೆಳಕಂಡಂತಿದೆ.. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​ ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ. ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ. ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ ಮುಂತಾದ ಭರವಸೆಗಳನ್ನ ನೀಡಿದೆ. -. : –- - - -