ಮೇ3 ರಂದು ‘ಎಚ್ ಡಿ ದೇವೇಗೌಡರ ಬದುಕು ಮತ್ತು ದುಡಿಮೆ ನೇಗಿಲ ಗೆರೆಗಳು’ ಪುಸ್ತಕ ಕುರಿತು ಸಂವಾದ. ಮೈಸೂರು,ಮೇ,1,2023(..):‘ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಬದುಕು ಮತ್ತು ದುಡಿಮೆ ನೇಗಿಲ ಗೆರೆಗಳು’ ಪುಸ್ತಕ ಕುರಿತು ಮೇ 3 ರಂದು ಚರ್ಚೆ ಮತ್ತು ಸಂವಾದ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಬುಧವಾರ(ಮೇ3) ಸಂಜೆ 5 ಗಂಟೆಗೆ ಮಾನಸ ಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ ವಿಜ್ಞಾನ ಭವನದ ಇನ್ಸ್ ಟಿಟ್ಯೂಷನ್ ಆಫ್ ಎಕ್ಸಲೆನ್ಸ್ ನಲ್ಲಿ ಈ ಸಂವಾದ ಕಾರ್ಯಕ್ರಮ ನಡೆಯಲಿದೆ. ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳು ಹಾಗೂ ವಿವಿಯ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಪ್ರೊ. ಎಸ್ .ಎನ್ ಹೆಗ್ಡೆ, ಮೈಸೂರು ವಿವಿ ಕುಲಪತಿ ಪ್ರೊ. ಎನ್.ಕೆ ಲೋಕನಾಥ್ , ಮೈಸೂರು ವಿವಿ ವಿಶ್ರಾಂತ ಕುಲಪತಿ ಹಾಗೂ ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಅಧ್ಯಕ್ಷರಾದ ಪ್ರೊ.ಕೆ.ಎಸ್ ರಂಗಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಹಿರಿಯ ಸಂಪಾದಕರು ಮತ್ತು ಮೂಲ ಪುಸ್ತಕದ ಲೇಖಕರಾದ ಸುಗತ ಶ್ರೀನಿವಾಸರಾಜು , ಕವಿ ಮತ್ತು ಪುಸ್ತಕದ ಕನ್ನಡ ಅನುವಾದಕರಾದ ರೋಸಿ ಡಿ’ಸೋಜಾ ಅವರು ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಸುಗತ ಶ್ರೀನಿವಾಸ್ ಅವರು ಬರೆದಿರುವ ಪೆಂಗ್ವಿನ್ ಸಂಸ್ಥೆ ಪ್ರಕಟಿಸಿರುವ ‘ ..’ ಪುಸ್ತಕವನ್ನ ರೋಸಿ ಡಿ’ಸೋಜಾ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. : – –- -