ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ ರೂ. ಹಣ ಚುನಾವಣಾಧಿಕಾರಿಗಳ ವಶಕ್ಕೆ. ಬಾಗಲಕೋಟೆ,ಏಪ್ರಿಲ್,29,2023(..):ಬಾಗಲಕೋಟೆಯಲ್ಲಿ ಚುನಾವಣಾಧಿಕಾರಿಗಳು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ ರೂ. ಹಣವನ್ನ ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆಯ ಲಕ್ಷಾನಟ್ಟಿ ಚೆಕ್ ಪೋಸ್ಟ್ ಬಳಿ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು 5 ಕೋಟಿ ರೂ. ಹಣವನ್ನ ಸೀಜ್ ಮಾಡಿದ್ದಾರೆ. ಬೊಲೆರೋ ವಾಹನದಲ್ಲಿ ಹುಬ್ಬಳ್ಳಿಯಿಂದ ಮುಧೋಳಕ್ಕೆ ಈ ಹಣವನ್ನ ಸಾಗಿಸುತ್ತಿದ್ದರು ಎನ್ನಲಾಗಿದೆ. ಆದರೆ ಹಣಕ್ಕೆ ದಾಖಲೆ ನೀಡದ ಹಿನ್ನೆಲೆ ಚುನಾವಣಾಧಿಕಾರಿಗಳು ಹಣವನ್ನ ವಶಕ್ಕೆ ಪಡೆದಿದ್ದು , ಆ ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿಲ್ಲ. : 5 – - –- .