ಜೆಡಿಎಸ್ ಗೆ ಮತ ಹಾಕಿದ್ರೆ ಪ್ರಯೋಜನವಿಲ್ಲ- ಸಂಸದ ಡಿ.ಕೆ ಸುರೇಶ್. ರಾಮನಗರ,ಏಪ್ರಿಲ್,29,2023(..):ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಎಲ್ಲಾ ಪಕ್ಷಗಳು ರೋಡ್ ಶೋ, ಪ್ರಚಾರದ ಮೂಲಕ ಮತದಾರರನ್ನ ಸೆಳೆಯುತ್ತಿದೆ. ಈ ಮಧ್ಯೆ ಜೆಡಿಎಸ್ ಗೆ ಮತ ಹಾಕಿದ್ರೆ ಯಾವುದೇ ಪ್ರಯೋಜನವಿಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. ಚನ್ನಪಟ್ಟಣ ದ ಕಾಂಗ್ರೆಸ್ ಅಭ್ಯರ್ಥಿ ಎಸ್ ಗಂಗಾಧರ್ ಪರ ಪ್ರಚಾರ ನಡೆಸಿ ಮಾತನಾಡಿದ ,ಕಾಂಗ್ರೆಸ್ ಸಂಸದ ಡಿಕೆ ಸುರೇಶ್​ , ಮಾಜಿ ಸಿಎಂ ಹೆಚ್. ​ಡಿ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲ್ಲ, ಜೆಡಿಎಸ್​ಗೆ ಮತಹಾಕಿ ಪ್ರಯೋಜನವಿಲ್ಲ. ರಾಜ್ಯಾದ್ಯಂತ ಕಾಂಗ್ರೆಸ್ ​ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಎಲ್ಲರೂ ಕಾಂಗ್ರೆಸ್ ಗೆ ಮತಹಾಕಿ. ಈ ಬಾರಿ ಅಧಿಕಾರಕ್ಕೆ ಬರುತ್ತದೆ ಎಂದು ಕರೆ ನೀಡಿದ್ದಾರೆ. : – – -- .