ಉತ್ತರ ಪ್ರದೇಶ ಮಾದರಿ ಬಗ್ಗೆ ಟೀಕಿಸಿ ಯೋಗಿ ಆದಿತ್ಯನಾಥ್ ಅವರಿಗೆ ಹತ್ತು ಸವಾಲುಗಳನ್ನಾಕಿದ ಮಾಜಿ ಸಿಎಂ ಸಿದ್ಧರಾಮಯ್ಯ. ಬೆಂಗಳೂರು,ಏಪ್ರಿಲ್,27,2023(..):ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಬಿಜೆಪಿಯ ಪರವಾಗಿ ಚುನಾವಣಾ ಪ್ರಚಾರ ಮಾಡಲು ಬಂದಿದ್ದು, ನಿನ್ನೆ ರಾಜ್ಯದ ಮಂಡ್ಯ ಮುಂತಾದ ಕಡೆ ಪ್ರಚಾರದಲ್ಲಿ ಪಾಲ್ಗೊಂಡು ಉತ್ತರ ಪ್ರದೇಶದ ಮಾದರಿಯ ಬಗ್ಗೆ ಮಾತನಾಡಿದ್ದಾರೆ. ಉತ್ತರ ಪ್ರದೇಶದ ಮಾದರಿ ಎಂದರೆ ಏನು ಎಂದು ಇಡೀ ಜಗತ್ತಿಗೆ ಗೊತ್ತಾಗಿದೆ. ಆದರೂ ಅದರ ಬಗ್ಗೆ ಕರ್ನಾಟಕದಲ್ಲೂ ಪ್ರಸ್ತಾಪಿಸುವುದು ಹಾಸ್ಯಾಸ್ಪದವಾದ ಸಂಗತಿಯಾಗಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಕುಟುಕಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಕೆಳಕಂಡ 10 ಅಂಶಗಳನ್ನ ಉಲ್ಲೇಖಿಸಿ ಟಾಂಗ್ ನೀಡಿದ್ದಾರೆ. : - – – - –