ನಮ್ಮ ಗ್ಯಾರಂಟಿಗಳ ಬಗ್ಗೆ ಮೋದಿ, ಅಮಿತ್ ಶಾ ಆತಂಕಪಡುವುದು ಬೇಡ- ಡಿಕೆ ಶಿವಕುಮಾರ್ ಟಾಂಗ್. ಬೆಂಗಳೂರು,ಏಪ್ರಿಲ್,27,2023(..):ಕಾಂಗ್ರೆಸ್​ ಗ್ಯಾರಂಟಿ ಕಾರ್ಡ್​ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ಹತಾಶರಾಗಿ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಟೀಕೆ ಮಾಡುತ್ತಿದ್ದಾರೆ. ಹೇಗಿದ್ದರೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲ್ಲ. ಪ್ರಧಾನಿ ಮೋದಿ, ಅಮಿತ್ ಶಾ ಆತಂಕಪಡುವ ಅಗತ್ಯವಿಲ್ಲ. ನಮ್ಮ ಗ್ಯಾರಂಟಿಗಳ ಬಗ್ಗೆ ಆತಂಕಪಡುವುದು ಬೇಡ. ಬಿಜೆಪಿಯವರು ಹಿಂದೆ ಕೊಟ್ಟಿದ್ದ ಯಾವುದೇ ಭರವಸೆ ಈಡೇರಿಸಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಗ್ಯಾರಂಟಿಗಳನ್ನು ಈಡೇರಿಸುತ್ತೆ ಎಂದು ತಿರುಗೇಟು ನೀಡಿದರು. : - – –- –