ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ನಟ ಕಿಚ್ಚ ಸುದೀಪ್ ರೋಡ್ ಶೋ, ಪ್ರಚಾರ. ಚಿತ್ರದುರ್ಗ,ಏಪ್ರಿಲ್,26,2023(..):ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ನಾಯಕರು ಅಬ್ಬರದ ಪ್ರಚಾರವನ್ನು ಕೈಗೊಂಡಿದ್ದಾರೆ. ನಟ ಕಿಚ್ಚ ಸುದೀಪ್ ಇಂದಿನಿಂದ ಚುನಾವಣಾ ಪ್ರಚಾರದ ಅಕಾಡಕ್ಕಿಳಿದಿದ್ದು, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪೇಸ್ವಾಮಿ ಪರ ಪ್ರಚಾರ ನಡೆಸಿದ್ದಾರೆ. ಹೌದು ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಪರವಾಗಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಇಂದು ಮೊಳಕಾಲ್ಮೂರು ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸುದೀಪ್ ನಗರದ ಬಸ್ ನಿಲ್ದಾಣದಿಂದ ರೋಡ್ ಶೋ ಆರಂಭಿಸಿ ಮತಯಾಚಿಸಿದರು. ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಪರವಾಗಿ ಕ್ಯಾಂಪೇನ್ ಮಾಡುವ ವೇಳೆ ಸುದೀಪ್ ನೋಡಲು ಸಾವಿರಾರು ಮಂದಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಅವರನ್ನು ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆಯೂ ನಟ ಸುದೀಪ್‌ ಜನರಿಗೆ ಮನವಿ ಮಾಡಿದರು. : - - - - –