ವರುಣಾದಲ್ಲಿ ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ, ಜೆಡಿಎಸ್ ಒಂದಾಗಿವೆ –ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ. ಮೈಸೂರು,ಏಪ್ರಿಲ್,25,2023(..):ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ, ಜೆಡಿಎಸ್ ಒಂದಾಗಿವೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ ಯತೀಂದ್ರ ಸಿದ‍್ಧರಾಮಯ್ಯ, ಸಿದ್ದರಾಮಯ್ಯ ಸೋಲಿಸಲು ಬಿಜೆಪಿ, ಜೆಡಿಎಸ್ ಒಂದಾಗಿವೆ. ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡಲಾಗಿದೆ. ಚಾಮುಂಡೇಶ್ವರಿ ಚುನಾವಣೆಯಂತೆ ಈ ಬಾರಿಯೂ ಒಂದಾಗಿವೆ. ಬಿಜೆಪಿ ಆದೇಶದಂತೆ ವರುಣದಲ್ಲಿ ಅಭ್ಯರ್ಥಿ ಬದಲು ಮಾಡಿದ್ದಾರೆ. ಸಿದ್ದರಾಮಯ್ಯ ಸೋಲಿಸಲು ರಾಹು ಕೇತು ಶನಿ ಒಂದಾಗಿದ್ದಾರೆ. ಕಾಂಗ್ರೆಸ್​​ ವೋಟ್ ಒಡೆಯಲು ಹಣದ ಆಮಿಷವೊಡ್ಡುತ್ತಿದ್ದಾರೆ ಎಂದು ಆರೋಪಿಸಿದರು. : - – - –- -. .