ಅಮುಲ್ ಹಾಲಿಗೆ ರಾಯಭಾರಿತನ ಮಾಡಲು ನಿರ್ಮಲಾ ಸೀತಾರಾಮನ್ ಬಂದಿದ್ದಾರೆ- ಹಲವು ಪ್ರಶ್ನೆಗಳನ್ನಾಕಿ ಗುಡುಗಿದ ಮಾಜಿ ಸಿಎಂ ಸಿದ‍್ಧರಾಮಯ್ಯ. ಬೆಂಗಳೂರು,ಏಪ್ರಿಲ್,24,2023(..):ನಂದಿನಿ ಮತ್ತು ಅಮುಲ್ ಹಾಲು ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಹಲವು ಪ್ರಶ್ನೆಗಳನ್ನಾಗಿ ಉತ್ತರಿಸುವಂತೆ ಆಗ್ರಹಿಸಿದ್ದಾರೆ. ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿದ್ದಾರೆ. ಆ ಸಭೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಿಕೊಂಡು ಹೋಗಿದ್ದರೆ ನಮಗೇನೂ ತಕರಾರುಗಳು ಇರುತ್ತಿರಲಿಲ್ಲ, ಆದರೆ ಕರ್ನಾಟಕಕ್ಕೆ ಚಿನ್ನದ ಕಿರೀಟವನ್ನೆ ತೊಡಿಸಿದ್ದೇವೆಂದು ಆತ್ಮದ್ರೋಹದ ಮಾತನಾಡಿದ್ದಾರೆ. ಕರ್ನಾಟಕಕ್ಕೆ ಅಮುಲ್ ಬಂದಿದ್ದು ರಾಜ್ಯದ ರೈತರ ನೆರವಿಗೆ ಎಂಬಂತೆ ಮಾತನಾಡಿದ್ದಾರೆ. ಬಿಜೆಪಿಯು ಮೊದಲಿನಿಂದಲೂ ಕರ್ನಾಟಕ ದ್ರೋಹಿ ರಾಜಕಾರಣವನ್ನೆ ಮಾಡಿಕೊಂಡು ಬಂದಿದೆ. ಅದರಲ್ಲೂ ಮೋದಿ, ಅಮಿತ್ ಶಾ ಜೋಡಿಯು ಬಿಜೆಪಿಯ ಚುಕ್ಕಾಣಿ ಹಿಡಿದ ಮೇಲಂತೂ ಕರ್ನಾಟಕದ ಆರ್ಥಿಕತೆಯನ್ನು ಹುರಿದು ಮುಕ್ಕುತ್ತಿದ್ದಾರೆ. ಇವರಿಬ್ಬರ ತಾಳಕ್ಕೆ ನಿರ್ಮಲಾ ಸೀತಾರಾಮನ್ ಆಗಾಗ ತಂಬೂರಿ ನುಡಿಸುತ್ತಾರೆ ಎಂದು ಸಿದ್ಧರಾಮಯ್ಯ ಲೇವಡಿ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಅವರಿಗೆ ಹತ್ತಾರು ಬಾರಿ ಪ್ರಶ್ನೆಗಳನ್ನು ಕೇಳಿದ್ದೇನೆ ಆದರೂ ಅವರು ಹೇಳಿದ ಸುಳ್ಳುಗಳನ್ನೆ ಹೇಳಿಕೊಂಡು ಓಡಾಡಿದ್ದಾರೆ. ರಾಜ್ಯಕ್ಕೆ ಕೇಂದ್ರದ ಕೊಡುಗೆಗಳೇನು? ಆರ್ಥಿಕತೆ, ಅಭಿವೃದ್ಧಿಯ ವಿಚಾರದಲ್ಲಿ ಕರ್ನಾಟಕದ ಬೆನ್ನಿಗೆ ಎಷ್ಟು ಸಾರಿ ಮೋದಿ ಅಮಿತ್ ಶಾ ಸರ್ಕಾರ ಇರಿದಿದೆ ಎಂಬುದರ ಗಾಯದ ಗುರುತುಗಳು ಹೇಳುತ್ತಿವೆ. ಈಗ ನಿರ್ಮಲಾ ಸೀತಾರಾಮನ್ ಅವರು ಅಮುಲ್ ಹಾಲಿಗೆ ರಾಯಭಾರಿತನ ಮಾಡಲು ಬಂದಿದ್ದಾರೆ. ಮೊದಲು ಹಲವು ಪ್ರಶ್ನೆಗಳಿಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದ ಸಿದ್ಧರಾಮಯ್ಯ, ನಂದಿನಿ ಸಂಸ್ಥೆ ಮತ್ತು ಕರ್ನಾಟಕದ ಹಾಲು ಉತ್ಪಾದಕರ ಕುರಿತಂತೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಕೆಳಕಂಡ ಪ್ರಶ್ನೆಗಳನ್ನಾಕಿದ್ದಾರೆ. : - - – -