ಚುನಾವಣಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಎಫ್ ಐಆರ್. ಬೆಂಗಳೂರು,ಏಪ್ರಿಲ್,24,2023(..):ಚುನಾವಣಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಏಪ್ರಿಲ್ 23 ರಂದು ರ್ಯಾಡಿಸನ್ ಬ್ಲೂ ಹೋಟೆಲ್ ​ನಲ್ಲಿ ಶ್ರೀನಿವಾಸ್ ಅವರು ಸಭೆ ನಡೆದುತ್ತಿದ್ದ ವೇಳೆ ಚುನಾವಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಚುನಾವಣಾ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ದಾಳಿ ವೇಳೆ ಸಹಕರಿಸದೇ ಎಸ್​ಟಿಎಫ್ ಅಧಿಕಾರಿಗಳ ವಿರುದ್ಧ ವಾಗ್ವಾದ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಅಧಿಕಾರಿಗಳ ದೂರು ಆಧರಿಸಿ ಎಫ್ ಐಆರ್ ದಾಖಲಾಗಿದೆ. : - - - -.