ಮುಡಾ ಹಗರಣ: ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್ ಬೆಂಗಳೂರು,ಅಕ್ಟೋಬರ್,3,2024 (..):ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಇಡಿ ಅಧಿಕಾರಿಗಳು ಬೆಳಿಗ್ಗೆ ಹೆಬ್ಬಾಳ ನಿವಾಸಕ್ಕೆ ತೆರಳಿ ಸಚಿವ ಭೈರತಿ ಸುರೇಶ್ ಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಈ ವೇಳೆ ನವರಾತ್ರಿ ಬಳಿಕ ವಿಚಾರಣೆಗೆ ಬರುವುದಾಗಿ ಸಚಿವ ಭೈರತಿ ಸುರೇಶ್ ತಿಳಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ದ ಇಸಿಐಆರ್ ದಾಖಲಿಸಿದೆ. ಇದೀಗ ಸಚಿವ ಭೈರತಿ ಸುರೇಶ್ ಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. : , , ,