ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಲು ಹೈಕೋರ್ಟ್ ನಕಾರ. ಬೆಂಗಳೂರು,ಏಪ್ರಿಲ್,21,2023(..): ರಾಜ್ಯವಿಧಾನಸಭಾ ಚುನಾವಣೆ ಹಿನ್ನೆಲೆ ಧಾರವಾಡ ಪ್ರವೇಶಿಸಲು ಅನುಮತಿ ಕೋರಿ ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಲು ಹೈಕೋರ್ಟ್ ನಿರಾಕರಿಸಿದೆ. ಧಾರವಾಡ ಪ್ರವೇಶಿಸದಂತೆ ಸುಪ್ರೀಂಕೋರ್ಟ್ಆದೇಶಿಸಿದೆ. ಸುಪ್ರೀಂಕೋರ್ಟ್ ಕೂಡ ಜಾಮೀನು ಷರತ್ತು ಸಡಿಲಿಸಿಲ್ಲ. ಹೀಗಿದ್ದಾಗ ವಿನಯ್ ಕುಲಕರ್ಣಿ ಅವರಿಗೆ ಕಾಂಗ್ರೆಸ್ ಏಕೆ ಟಿಕೆಟ್ ಕೊಟ್ಟಿದೆ ಎಂದು ವಿನಯ್ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನಿಸಿದೆ. ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ಸಿಬಿಐ ಪರ ಎಸ್ ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದರು. : - – - - -.