ನಾಳೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ. ಬೆಂಗಳೂರು,ಏಪ್ರಿಲ್,20,2023(..):ನಾಳೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ವೆಬ್ ಸೈಟ್ ನಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ. 9-03-2023ರಿಂದ 29-03-2023ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಸಲಾಗಿತ್ತು. ನಾಳೆ ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದ್ದು ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು ://.. ಜಾಲತಾಣದಲ್ಲಿ ಬೆಳಿಗ್ಗೆ 11 ಗಂಟೆಯ ನಂತ್ರ ವೀಕ್ಷಿಸಬಹುದಾಗಿದೆ. : - - –- - .