ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಸಾವು. ತುಮಕೂರು,ಏಪ್ರಿಲ್,20,2023(..):ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಬೆಳಗುಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿತೇಶ್ (14) ಪ್ರಜ್ವಲ್ (13) ಮೃತಪಟ್ಟ ಬಾಲಕರು. ಮನೆ ಮೇಲೆ ಆಟವಾಡುವಾಗ ಈ ದುರಂತ ಸಂಭವಿಸಿದೆ. ಮನೆ ಮೇಲೆ ಹಾದು ಹೋಗಿದ್ದ ತಂತಿ ತಗುಲಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಇದಕ್ಕೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಪೋಷಕರು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕುರಿತು ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – - -