ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ: ಯಾವ ಕ್ಷೇತ್ರ ಅಂತ ಇನ್ನೂ ಗೊತ್ತಿಲ್ಲ- ಸಂಸದ ಡಿ.ಕೆ ಸುರೇಶ್. ಚನ್ನಪಟ್ಟಣ,ಏಪ್ರಿಲ್,20,2023(..):ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದುಈ ಮಧ್ಯೆ ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಯಾವ ಕ್ಷೇತ್ರ ಅಂತ ಇನ್ನೂ ಗೊತ್ತಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಕುತೂಹಲ ಮೂಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಇಂದು ಮಾತನಾಡಿದ ಸಂಸದ ಡಿ.ಕೆ ಸುರೇಶ್, ನಾಮಪತ್ರ ಸಲ್ಲಿಸಲು ಬೆಂಗಳೂರಿಗೆ ಹೋಗುತ್ತಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ಕೂಡ ನಾಮಪತ್ರ ಸಲ್ಲಿಸುತ್ತೇನೆ. ಯಾವ ಕ್ಷೇತ್ರದಿಂದ ಅರ್ಜಿ ಹಾಕುತ್ತೇನೆ ಎಂದು ನನಗೆ ಗೊತ್ತಿಲ್ಲ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ನಾಮಪತ್ರ ಸಲ್ಲಿಸುತ್ತೇನೆ. ಕಾದು ನೋಡಿ ಎಂದರು ಹಾಗೆಯೇ ಮಂಡ್ಯ ರಾಜಕಾರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದರು. ಸಂಸದ ಡಿ.ಕೆ ಸುರೇಶ್ ಅವರು ಪದ್ಮನಾಭನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಾರೆ ಎಂದು ನಿನ್ನೆ ಸುದ್ಧಿಯಾಗಿತ್ತು. : - - – -- .