ನಾಮಪತ್ರ ಸಲ್ಲಿಕೆಗೂ ಮುನ್ನ ಸಿಎಂ ಬೊಮ್ಮಾಯಿ ಭರ್ಜರಿ ರೋಡ್ ಶೋ: ನಟ ಕಿಚ್ಚ ಸುದೀಪ್ , ಜೆಪಿ ನಡ್ಡಾ ಸಾಥ್. ಹಾವೇರಿ,ಏಪ್ರಿಲ್,19,2023(..):ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು ಇದಕ್ಕೂ ಮುನ್ನ ಭರ್ಜರಿ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯ ಚೆನ್ನಮ್ಮ ಸರ್ಕಲ್ ನಿಂದ ತಹಶೀಲ್ದಾರ್ ಕಚೇರಿಯವರೆಗೆ ಭರ್ಜರಿ ರೋಡ್ ಶೋ ನಡೆಸಿದ್ದು ನಟ ಕಿಚ್ಚ ಸುದೀಪ್ , ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಸಚಿವ ಗೋವಿಂದ ಕಾರಜೋಳ ಸಾಥ್ ನೀಡಿದ್ದಾರೆ. ರೋಡ್ ಶೋ ವೇಳೆ ಸಾವಿರಾರು ಜನರು ಪಾಲ್ಗೊಂಡಿದ್ದಾರೆ. ಇನ್ನು ಶಿಗ್ಗಾಂವಿಯಲ್ಲಿ ಈಗಾಗಲೇ ಗೆಲುವು ಸಾಧಿಸಿದ್ದೇನೆ . ವಿಜಯೋತ್ಸವ ಆಚರಿಸುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಕೂಗಿದರು. : - – - -