ತಾತನ ರೀತಿ ಲಾ ಓದಿ ರಾಜಕೀಯಕ್ಕೆ ಎಂಟ್ರಿ ಕೊಡ್ತೇನೆ- ರಾಜಕಾರಣಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ ಸಿದ್ಧರಾಮಯ್ಯ ಮೊಮ್ಮಗ. ಮೈಸೂರು,ಏಪ್ರಿಲ್,19,2023(..):ಈ ಬಾರಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಪರ ನಿನ್ನೆಯಷ್ಟೆ ಮೊಮ್ಮಗ ಧವನ್ ರಾಕೇಶ್ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ರಾಜಕೀಯಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ವರುಣಾ ಅಖಾಡಕ್ಕೆ ಎಂಟ್ರಿ ಕೊಡಲು ಸಿದ್ದು ಮೊಮ್ಮಗ ಸಜ್ಜಾಗಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಮೊಮ್ಮಗ ಧವನ್ ರಾಕೇಶ್, ನನಗೆ ರಾಜಕೀಯದಲ್ಲಿಆಸಕ್ತಿ ಇದೆ. ತಾತನ ರೀತಿ ಲಾ ಓದಿ ರಾಜಕೀಯಕ್ಕೆ ಎಂಟ್ರಿ ಕೊಡ್ತೇನೆ ಎಂದಿದ್ದಾರೆ. ರಾಜಕೀಯದಲ್ಲಿರಲು ತಂದೆ ರಾಕೇಶ್ ಅವರಿಗೆ ತುಂಬಾ ಆಸೆ ಇತ್ತು. ಆದರೆ ಅವರು ತೀರಿಕೊಂಡ್ರು, ನಾನು ಅವರ ಕನಸನ್ನು ನನಸು ಮಾಡುತ್ತೇನೆ . ನಾನು ಈಗ ದ್ವಿತೀಯ ಪಿಯುಸಿ ಓದುತ್ತಿದ್ದೇನೆ. ಮುಂದೆ ತಾತನ ರೀತಿ ಲಾ ಮಾಡಿ ರಾಜಕೀಯಕ್ಕೆ ಬರ್ತೀನಿ ಎಂದು ಹೇಳಿದರು. : - -- -