ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂಬ ಜಗದೀಶ್ ಶೆಟ್ಟರ್ ಆರೋಪಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ.. ಬೆಂಗಳೂರು,ಏಪ್ರಿಲ್,18,2023(..):ನನಗೆ ಟಿಕೆಟ್ ಕೈತಪ್ಪಲು ಬಿಎಲ್ ಸಂತೋಷ್ ಕಾರಣ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಸರಿಯಲ್ಲ. ನಾವು ರಾಜ್ಯದಿಂದ ಅಭ್ಯರ್ಥಿಗಳ ಹೆಸರನ್ನು ಕಳಿಸಿದ್ದವು. ಒಂದು ನೀತಿಯ ಮೇಳೆ ಹೈಕಮಾಂಡ್ ನವರು ನಿರ್ಧಾರ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಆರೋಪದ ಬಗ್ಗೆ ನಾವೇನು ತಲೆಕೆಡಿಸಿಕೊಳ್ಳಲ್ಲ ಎಂದರು. ಉತ್ತರ ಕರ್ನಾಟಕದಲ್ಲಿ ಹೆಚ್ಚು ಸೀಟ್ ಗೆಲ್ಲಲು ರೂಪುರೇಷೆ ಹಾಕುತ್ತೇವೆ. ಉತ್ತರ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. : - - – – - -.