ನಾನು ಮತ್ತು ಸವದಿ ಪಕ್ಷ ತೊರೆದಿದ್ದರಿಂದ ಬಿಜೆಪಿಗೆ ಹಾನಿ: ಪ್ಯಾಚ್ ಅಪ್ ಮಾಡಲು ಆಗಲ್ಲ-ಮಾಜಿ ಸಿಎಂ ಜಗದೀಶ್ ಶೆಟ್ಟರ್. ಹುಬ್ಬಳ್ಳಿ,ಏಪ್ರಿಲ್,17,2023(..):ನಾನು ಮತ್ತು ಲಕ್ಷ್ಮಣ್ ಸವದಿ ಪಕ್ಷ ತೊರೆದಿದ್ದರಿಂದ ಬಿಹೆಪಿಗೆ ಹಾನಿಯಾಗಲಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾಗೆ ಪ್ಯಾಚ್ ಅಪ್ ಮಾಡಲು ಆಗಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಜಗದೀಶ್ ಶೆಟ್ಟರ್, ಈ ಬಾರಿ ಬಿಜೆಪಿಗೆ ಅಧಿಕಾರಕ್ಕೆ ಬರುವ ಅವಕಾಶವಿತ್ತು. ಆದರೆ ಕೆಲವೊಬ್ಬರಿಗೆ ಬಿಜೆಪಿ ಅಧಿಕಾರಕ್ಕೆ ಬರೋದು ಬೇಡ ಅನ್ನಿಸುತ್ತಿದೆ. ಹಾಗಾಗಿಯೇ ಪ್ರಮುಖ ನಾಯಕರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ನನ್ನ ವಿರುದ್ದ 1 ವರ್ಷದಿಂದ ಷಡ್ಯಂತ್ರ ಮಾಡಿಕೊಂಡು ಬಂದಿದ್ದಾರೆ. ಬಿಜೆಪಿಯವರೇ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆದಿದ್ದಾರೆ ಎಂದು ವ್ಯಂಗ್ಯವಾಡಿದರು. ಬಿಜೆಪಿ- ಕಾಂಗ್ರೆಸ್ ನಲ್ಲಿ ನನಗೆ ಯಾವುದೇ ವ್ಯತ್ಯಾಸ ವ್ಯತ್ಯಾಸ ಕಂಡಿಲ್ಲ. ಕುಸುಮಾ ಶಿವಳ್ಳಿ ಪ್ರಚಾರಕ್ಕೆ ಬರಬೇಕೆಂದು ಆಹ್ವಾನಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದರು. : - – ’ - - - .