ಶೆಟ್ಟರ್ ಪಕ್ಷ ಬಿಟ್ಟು ಹೋಗಬಾರದಿತ್ತು: ಬಿಜೆಪಿ ಬಹುಮತಕ್ಕಿಂತ 15 ಹೆಚ್ಚು ಸ್ಥಾನಗಳನ್ನ ಗೆಲ್ಲಲಿದೆ- ಪ್ರಹ್ಲಾದ್ ಜೋಶಿ. ರಾಯಚೂರು,ಏಪ್ರಿಲ್,17,2023(..):ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತಕ್ಕಿಂತ 15 ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತದೆ. ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ ನಡ್ಡಾ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಇಂದು ಮಾತನಾಡಿದ ಪ್ರಹ್ಲಾದ್ ಜೋಶಿ, ಏಪ್ರಿಲ್ 19 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬರಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಲಿದ್ದಾರೆ ಎಂದರು. ಇನ್ನು ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ವಿಚಾರ ಕುರಿತು ಬೇಸರ ವ್ಯಕ್ತಪಡಿಸಿದ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಹೋಗಬಾರದಿತ್ತು. ಬಿಜೆಪಿ ಪಕ್ಷ ಬಲಪಡಿಸಲು ಎಲ್ಲರೂ ಒಗ್ಗಟ್ಟಾಗಿ ಇರುತ್ತೇವೆ ಎಂದರು. ಕಾಂಗ್ರೆಸ್ ನಾಯಕರು ಕರ್ನಾಟಕ ವಿಧಾನಸಭೆ ಚುನಾವಣೆಹಿನ್ನೆಲೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಇಂತಹ ಭರವಸೆ ರಾಜಸ್ಥಾನದಲ್ಲೂ ಕಾಂಗ್ರೆಸ್ ಘೋಷಣೆ ಮಾಡಿತ್ತು. ಆದರೆ ಈವರೆಗೆ ಯಾಕೆ ಈಡೇರಿಸಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದರು. : - - 15 - - – .