ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಬೆಂಗಳೂರು, ಆಗಸ್ಟ್,19,2024 (..):ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ವಿಚಾರಣೆಯನ್ನ ಕೋರ್ಟ್ ಆಗಸ್ಟ್ 22ಕ್ಕೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಎ1 ಪವಿತ್ರಾಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆಯನ್ನ ಆಗಸ್ಟ್ 22ಕ್ಕೆ ಮುಂದೂಡಿಕೆ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. : , , , ,