ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆಗೆ ಒಪ್ಪಿದ್ದು, ಅವರನ್ನ ಸ್ವಾಗತಿಸುತ್ತೇವೆ- ಚರ್ಚೆ ಬಳಿಕ ಡಿಕೆ.ಶಿವಕುಮಾರ್ ಸ್ಪಷ್ಟನೆ. ಬೆಂಗಳೂರು,ಏಪ್ರಿಲ್,14,2023(..):ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರಲು ಒಪ್ಪಿದ್ದಾರೆ. ಅವರನ್ನ ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಲಕ್ಷ್ಮಣ್ ಸವದಿ ಅವರನ್ನ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಿದ್ದರಾಮಯ್ಯ ನಿವಾಸಕ್ಕೆ ಕರೆತಂದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದರು. ಚರ್ಚೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ,ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸವದಿ ಒಪ್ಪಿದ್ದಾರೆ. ಲಕ್ಷ್ಮಣ್ ಸವದಿ ಭೇಟಿ ಫಲಪ್ರದವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಹಲವರು ಸೇರಲಿದ್ದಾರೆ. ಎಲ್ಲವನ್ನೂ ಲಕ್ಷ್ಮಣ್ ಸವದಿ ಜೊತೆ ಚರ್ಚೆ ಮಾಡಿದ್ದೇವೆ. ಸಂಜೆ 4 ಗಂಟೆಗೆ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಲಕ್ಷ್ಮಣ್ ಸವದಿರನ್ನ ಪಕ್ಷಕ್ಕೆ ಸ್ವಾಗತಿಸುತ್ತೇನೆ. ರಾಜ್ಯ ಹೈಕಮಾಂಢ್ ಎಲ್ಲಾ ನಾಯಕರು ಸ್ವಾಗತಿಸುತ್ತೇವೆ. ಎಂದರು. ನಂತರ ಮಾತನಾಡಿದ ಲಕ್ಷ್ಮಣ್ ಸವದಿ, ನನ್ನ ಷರತ್ತುಗಳಿಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಒಪ್ಪಿದ್ದಾರೆ. ಅಥಣಿ ಕ್ಷೇತ್ರದಿಂದ ನನಗೆ ಟಿಕೆಟ್ ಕೊಡಬೇಕು. ನನ್ನ ಕ್ಷೇತ್ರಕ್ಕೆ ಅನುದಾನ ಕೊಡಬೇಕು ಎಂದು ಕೇಳಿದ್ದೇನೆ ಎಂದು ತಿಳಿಸಿದರು. : - - – – .