ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮದ್ಧೂರು ಮೂಲದ 6 ಮಂದಿ ದುರ್ಮರಣ. ಕೊಡಗು,ಏಪ್ರಿಲ್,14,2023(..):ಕೆಎಸ್ ಆರ್ ಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿ-ಮಂಗಳೂರು ನಡುವೆ ಹೆದ್ದಾರಿಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಸಂಪಾಜೆ ಬಳಿ ಈ ಘಟನೆ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ 6 ಜನರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೇ, ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಮಂಡ್ಯ ಜಿಲ್ಲೆಯ ಮದ್ದೂರು ಮೂಲದವರು ಎಂದು ಗುರುತಿಸಲಾಗಿದೆ. ಮೃತರು ಕಾರಿನಲ್ಲಿ ಮಂಡ್ಯದಿಂದ ಮಂಗಳೂರಿಗೆ ತೆರಳುತ್ತಿದ್ದರು. ಕೆಎಸ್ ಆರ್ ಟಿಸಿ ಬಸ್ ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿತ್ತು ಈ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. : - - – -6 –-