ನಾಳೆ ಶಿಗ್ಗಾಂವಿ ಅಭ್ಯರ್ಥಿಯಾಗಿ ನಾಮಪತ್ರ : ಇಂದು ಕ್ಷೇತ್ರದ ಜನಪ್ರತಿನಿಧಿಗಳ ಸಭೆ ಕರೆದ ಸಿಎಂ ಬೊಮ್ಮಾಯಿ. ಹಾವೇರಿ,ಏಪ್ರಿಲ್,14,2023(..):ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಮೊದಲ ದಿನ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ನಾಳೆ ಇಡೀ ದಿನ ಕ್ಷೇತ್ರದಲ್ಲೇ ಇದ್ದು ಗೆಲ್ಲುವ ಬಗ್ಗೆ ರಣತಂತ್ರ ರೂಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದಲ್ಲಿನ ತಮ್ಮ ಪಕ್ಷದ ಎಲ್ಲಾ ಜನಪ್ರತಿನಿಧಿಗಳ ಸಭೆ ಕರ ಕರೆದಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಮಾಡಬೇಕಾದ ತಂತ್ರಗಳ ಕುರಿತು ಚರ್ಚಿಸಲಿದ್ದಾರೆ. : – –-