ಲಕ್ಷ್ಮಣ್ ಸವದಿಗೆ ಕಾಂಗ್ರೆಸ್ ಸೇರ್ಪಡೆಗೆ ಆಹ್ವಾನ ನೀಡಿದ ಬಿ.ಕೆ ಹರಿಪ್ರಸಾದ್. ಬೆಂಗಳೂರು,ಏಪ್ರಿಲ್,13,2023(..):ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ಸಿಡಿದೆದ್ದಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನಾಳೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೆ ಲಕ್ಷ್ಮಣ್ ಸವದಿಗೆ ಕಾಂಗ್ರೆಸ್ ಸೇರ್ಪಡೆಯಾಗಲು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಆಹ್ವಾನ ನೀಡಿದ್ದಾರೆ. ಈ ಕುರಿತು ಮಾತನಾಡಿದ ಬಿ.ಕೆ ಹರಿಪ್ರಸಾದ್, ಲಕ್ಷ್ಮಣ್ ಸವದಿ ಹಿರಿಯ ಮುಖಂಡ. ಡಿಸಿಎಂ ಹುದ್ದೆ ನಿಭಾಯಿಸಿದವರು. ಕಾಂಗ್ರಸ್ ಸಿದ್ದಾಂತ ಒಪ್ಪಿ ಕಾಂಗ್ರೆಸ್ ಬರುವುದಾದರೇ ಬರಬಹುದು. ಕಾಂಗ್ರೆಸ್ ಗೆ ಸೇರ್ಪಡೆಯಾಗಬಹುದು ಎಂದು ಹೇಳಿದ್ದಾರೆ. : –- – – .