ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ: ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಆರ್.ಶಂಕರ್. ಬೆಂಗಳೂರು,ಏಪ್ರಿಲ್,12,2023(..):ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆರ್.ಶಂಕರ್ ರಾಜೀನಾಮೆ ಸಲ್ಲಿಸಿದರು. ಇಂದು ವಿಧಾನಸೌಧದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಆರ್.ಶಂಕರ್ ರಾಜೀನಾಮೆ ಸಲ್ಲಿಕೆ ಮಾಡಿದರು. ಆರ್. ಶಂಕರ್ ರಾಣಿಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಟಿಕೆಟ್ ಬೇರೆಯರಿಗೆ ನೀಡಿದ್ದು ಈ ಹಿನ್ನೆಲೆಯಲ್ಲಿ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾರ್ಯಕರ್ತರ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದೇನೆ. ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಆರ್.ಶಂಕರ್ ತಿಳಿಸಿದ್ದಾರೆ. : . - –-