ಸಮಯ ನೋಡಿ ಜೆಡಿಎಸ್ 2ನೇ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ. ಬೆಂಗಳೂರು,ಏಪ್ರಿಲ್,10,2023(..):ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದ್ದು ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಜೆಡಿಎಸ್ 2ನೇ ಪಟ್ಟಿ ಬಿಡುಗಡೆಯನ್ನ ಮುಂದೂಡುತ್ತಲೇ ಬಂದಿದೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಮಯ ನೋಡಿ ಅಭ್ಯರ್ಥಿಗಳ 2ನೇ ಲೀಸ್ಟ್ ಬಿಡುಗಡೆ ಮಾಡುತ್ತೇವೆ. ಸದ್ಯ ಪಂಚ ರತ್ನಯಾತ್ರೆಯಲ್ಲಿ ನಾನು ಬ್ಯುಸಿಯಾಗಿದ್ದೇನೆ. ಈಗಗಲೇ ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿದ್ದೇನೆ, ಶೀಘ್ರದಲ್ಲೇ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. : - -2nd - - .