ತೆಲಂಗಾಣದಲ್ಲಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ. ಹೈದರಾಬಾದ್,ಏಪ್ರಿಲ್,8,2023(..): ಸಿಕಂದರಾಬಾದ್-ತಿರುಪತಿ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತೆಲಂಗಾಣಕ್ಕೆ ಭೇಟಿ ನೀಡಿದ್ದರು. ಈ ವೇಳೆ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಈ ಮಾರ್ಗದಲ್ಲಿ ಸೆಮಿ-ಹೈಸ್ಪೀಡ್ ರೈಲು ಲೋಕೋಮೋಟಿವ್ ನ 12 ನೇ ಘಟಕವಾಗಲಿದೆ. ಪ್ರಧಾನಿ ಮೋದಿ ಅವರು ಹೈದರಾಬಾದ್ ಸಮೀಪದ ಬೀಬಿನಗರದ ಏಮ್ಸ್ ಹಾಗೂ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. : - - -.